ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕೆ ಆಗುತ್ತೆ : ಬಿಜೆಪಿ ವಿರುದ್ಧ ಡಿಕೆಶಿ ಗರಂ
ಬೆಳಗಾವಿ: ಬಿಜೆಪಿ ನಾಯಕರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡುವುದಕ್ಕೆ ಆಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಬಹಳ ಮುಖ್ಯ. ಆದರೆ ಬಿಜೆಪಿಯವರಿಗೆ ಇದರ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡುವುದಕ್ಕೆ ಸಾಧ್ಯ..? ಬಿಜೆಪಿಗೆ ಕೇವಲ ರಾಜಕಾತಣ ಬೇಕು. ಅವರು ಕೇವಲ ರಾಜಕಾರಣವನ್ನೇ ಮಾಡಿಕೊಂಡು ಇರಲಿ. ನಾವೂ ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಇನ್ನು ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದುದು. ಸದನದ ಕಲಾಪ ಸಮಯದಲ್ಲೂ ಕೆಲವು ವಿಚಾರಗಳ ಚರ್ಚೆಗೆ ಸಭೆ ಕರೆದಾಗ ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸುತ್ತೇವೆ. ರಾಜಕೀಯ ಮಾಡಲು ಬಯಸುವವರು ಸಭೆಗೆ ಬರುವುದಿಲ್ಲ. ನಾವು ಸಹಜವಾಗಿ ಭೋಜನ ಕೂಟಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ ಎಂದು ಡಿನ್ನರ್ ಪಾರ್ಟಿಯ ಬಗ್ಗೆ ವಿವರಣೆ ನೀಡಿದ್ದಾರೆ.