For the best experience, open
https://m.suddione.com
on your mobile browser.
Advertisement

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

06:45 PM May 08, 2024 IST | suddionenews
ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ   ಕುಮಾರಸ್ವಾಮಿಗೆ ಡಿಕೆಶಿ ಟಾಂಗ್
Advertisement

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

Advertisement
Advertisement

'ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

Advertisement
Advertisement

ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ.

ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ' ಎಂದಿದ್ದಾರೆ.

Advertisement
Tags :
Advertisement