20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?
ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ ಪಾಸ್ ಆಗಿರುವುದು 6,39,204 ವಿದ್ಯಾರ್ಥಿಗಳು ಮಾತ್ರ. 2,28,763 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಕಳೆದ ವರ್ಷ 8,35,102 ವಿದ್ಯಾರ್ಥಿಗಳು ಪರೀಕ್ಷೆ ಬರದಿದ್ದರು. ಅದರಲ್ಲಿ 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದರು.
ಪ್ರತಿ ವರ್ಷ ರಾಜ್ಯದಲ್ಲಿ ನಾಲ್ಲೈದು ಜನ ಆದರೂ 625ಕ್ಕೆ 625 ಅಂಕವನ್ನು ಗಳಿಸುತ್ತಿದ್ದರು. ಆದರೆ ಈ ಬಾರಿ ರಾಜ್ಯಕ್ಕೆ ಓರ್ವ ವಿದ್ಯಾರ್ಥಿನಿ ಮಾತ್ರ ಅಷ್ಟು ಅಂಕವನ್ನು ಗಳಿಸಿದ್ದಾರೆ. ಬಾಗಲಕೋಟೆಯ ಅಂಕಿತಾ ಬಸಪ್ಪ 625ಕ್ಕೆ 625 ಅಂಕವನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರತಿ ವರ್ಷ ಕೂಡ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಸಿಗುತ್ತದೆ. ಆದರೆ ಈ ಸಲ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್ ನೀಡಿದೆ. ಆದರೂ ಫಲಿತಾಂಶ ಹೇಳಿಕೊಳ್ಳುವಷ್ಟು ಬಂದಿಲ್ಲ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಕಡಿಮೆ ಫಲಿತಾಂಶ ಬಂದಿರುವುದನ್ನು ಗಮನಿಸಬಹುದು.