For the best experience, open
https://m.suddione.com
on your mobile browser.
Advertisement

ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ : ಆಕಸ್ಮಿಕವೋ..? ಆತ್ಮಹತ್ಯೆಯೋ..?

12:55 PM Oct 08, 2023 IST | suddionenews
ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ   ಆಕಸ್ಮಿಕವೋ    ಆತ್ಮಹತ್ಯೆಯೋ
Advertisement

Advertisement

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅರಳಸುರುಳಿಯ ಕೆಕೊಡ್ ನಲ್ಲಿ ನಡೆದಿದೆ. ಗಂಡ - ಹೆಂಡತಿ, ಒಬ್ಬ ಮಗ ಸಾವನ್ನಪ್ಪಿದ್ದು, ಒಬ್ಬ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಮೃತಪಟ್ಟ ರಾಘವೇಂದ್ರ ಕೆಕೊಡ್ ಕುಟುಂಬ ಅರ್ಚಕ ವೃತ್ತಿಯನ್ನು ನಡೆಸುತ್ತಿತ್ತು. ಮನೆಯಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಹೊತ್ತುಕೊಂಡಿದ್ದು, 65 ವರ್ಷದ ರಾಘವೇಂದ್ರ, 55 ವರ್ಷದ ನಾಗರತ್ನಾ, ಹಿರಿಯ ಮಗ 30 ವರ್ಷದ ಶ್ರೀರಾಮ ಸಾವನ್ನಪ್ಪಿದ್ದಾರೆ. 28 ವರ್ಷದ ಮಗನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಯ ಒಳಗೆ ಕಟ್ಟಿಗೆಗಳನ್ನು ಇಟ್ಟುಕೊಂಡಿದ್ದರು. ಈ ಕಟ್ಟಿಗೆಗೆ ಬೆಂಕಿ ತಾಕಿ ಈ ದುರ್ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಹೊತ್ತುಕೊಂಡಿದ್ದನ್ನು ಗಮನಿಸಿದ ಗ್ರಾಮಸ್ಥರು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳೀಯರು ಕೂಡ ಒಳಗಿದ್ದವರು ಹೊರ ತರಲು ಸಹಾಯ ಮಾಡಿದ್ದಾರೆ.

ಇನ್ನು ಈ ಸಾವಿನ ಸುತ್ತ ಹಲವು ಅನುಮಾನದ ಹುತ್ತ ಬೆಳೆದಿದೆ. ಕೌಟುಂಬಿಕ ಸಮಸ್ಯೆ ಕೂಡ ಇತ್ತು ಎನ್ನಲಾಗುತ್ತಿದೆ. ಹೀಗಾಗಿ ಇದು ಆತ್ಮಹತ್ಯೆಯೋ, ಆಕಸ್ಮಿಕವೋ ಎಂಬ ಅನುಮಾನ ಉಂಟಾಗಿದೆ. ಸದ್ಯ ಶಿವಮೊಗ್ಗ ಎಸ್ಪಿ ಜಿಕೆ ಮಿಥುನ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Tags :
Advertisement