Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯಡಿಯೂರಪ್ಪ ಅವರ ಕನಸಿನ ಯೋಜನೆ ಹೆಣ್ಣುಮಕ್ಕಳ ಕೈ ಸೇರುವ ಸಮಯ..!

09:27 AM Sep 05, 2024 IST | suddionenews
Advertisement

ಬೆಂಗಳೂರು: ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದರು. ಹುಟ್ಟಿದ ಮಗುವಿನ ಹೆಸರಿಗೆ ಹಣ ಡೆಪಾಸಿಟ್ ಮಾಡಿಸುವ ಯೋಜನೆ. ಇದೀಗ ಆ ಯೋಜನೆ ಮೆಚ್ಯುರಿಟಿ ಆಗುವ ಸಮಯ ಬಂದಿದೆ. ಅರ್ಹ ಹೆಣ್ಣು ಮಕ್ಕಳಿಗೆ ಆ ಯೋಜನೆಯ ಹಣ ಕೈ ಸೇರಲಿದೆ. ಈ ಬಗ್ಗೆ ಯಡಿಯೂರಪ್ಪ ಅವರು ಟ್ವೀಟ್ ಕೂಡ ಮಾಡಿದ್ದಾರೆ.

Advertisement

'ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಹೆಣ್ಣುಮಗುವಿನ ಸ್ಥಾನ ಹೆಚ್ಚಿಸಲು ಹಾಗೂ ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣುಮಕ್ಕಳ ಜನನವನ್ನು ಉತ್ತೇಜಿಸಲು 2006-07ನೇ ಸಾಲಿನಲ್ಲಿ, ದೇಶದಲ್ಲೇ ಮೊದಲ ಬಾರಿಗೆ, ಹೆಣ್ಣು ಮಕ್ಕಳ ರಕ್ಷಣೆಗಾಗಿ "ಭಾಗ್ಯಲಕ್ಷ್ಮಿ” ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದದ್ದು ನನ್ನ ರಾಜಕೀಯ ಜೀವನದ ಒಂದು ಸಂತೃಪ್ತಿಯ ಮೈಲಿಗಲ್ಲು. ಈ ಮಹತ್ವದ, ದೂರದೃಷ್ಟಿ ಯೋಜನೆಯ ಆರಂಭಿಕ ವರ್ಷದಲ್ಲಿ ನೋಂದಾಯಿಸಿದ್ದ ಸುಮಾರು 2.30 ಲಕ್ಷ ಫಲಾನುಭವಿಗಳು ಶೀಘ್ರದಲ್ಲಿ ಪರಿಪಕ್ವ ಮೊತ್ತ ಪಡೆಯಲಿರುವುದು ಅತ್ಯಂತ ಸಂತಸದ ಸಂಗತಿ. ಲಕ್ಷಾಂತರ ಬಡ ಹೆಣ್ಣುಮಕ್ಕಳ ಜೀವನವನ್ನು ಬೆಳಗುವ ಈ ಸಾರ್ಥಕ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರಿಸಿಕೊಂಡು ಹೋಗಲಿ, ಬಡ ಹೆಣ್ಣುಮಕ್ಕಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ತನ್ನ ಕರ್ತವ್ಯ ನಿರ್ವಹಿಸಲಿ ಎಂದು ಈ ಸಂದರ್ಭದಲ್ಲಿ ಒತ್ತಾಯಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

 

Advertisement

2006-2007ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಹೆಣ್ಣು ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದರು. ಇದೀಗ ಮೊದಲ ಹಂತದಲ್ಲಿ ನೋಂಣಿಯಾದವರಿಗೆ ಈಗ ಹಣ ಸಿಗಲಿದೆ. 2.30 ಲಕ್ಷ ಮಂದಿ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ರಾಜ್ಯ ಸರ್ಕಾರವೂ ಈ ಯೋಜನೆಯನ್ನು ಅಂಚೆ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

Advertisement
Tags :
bengaluruBS Yeddyurappachitradurgasuddionesuddione newsಕನಸಿನ ಯೋಜನೆಚಿತ್ರದುರ್ಗಬೆಂಗಳೂರುಯಡಿಯೂರಪ್ಪಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article