For the best experience, open
https://m.suddione.com
on your mobile browser.
Advertisement

ರೈಲು ಅಪಘಾತ : ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ : ಐವರು ಸಾವು, ಹಲವರಿಗೆ ಗಾಯ...!

11:16 AM Jun 17, 2024 IST | suddionenews
ರೈಲು ಅಪಘಾತ   ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ   ಐವರು ಸಾವು  ಹಲವರಿಗೆ ಗಾಯ
Advertisement

ಸುದ್ದಿಒನ್ : ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ.  ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಸೋಮವಾರ ಬೆಳಗ್ಗೆ 8.30ಕ್ಕೆ ಉತ್ತರ ಗಡಿ ರೈಲ್ವೆ ವಲಯದ ವ್ಯಾಪ್ತಿಯ ನ್ಯೂ ಜಲ್ಪೈಗುರಿ ರೈಲು ನಿಲ್ದಾಣದಿಂದ 11 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ.

Advertisement

ಅಪಘಾತದ ತೀವ್ರತೆಗೆ ಬೋಗಿಗಳು ಚೆಲ್ಲಾಪಿಲ್ಲಿಯಾಗಿವೆ. ಕೆಲವು ಬೋಗಿಗಳನ್ನು ಒಂದರ ಮೇಲೊಂದರಂತೆ ನಿಂತಿವೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು ಅಪಘಾತದ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ.

Advertisement

Advertisement

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ಡಾಗೆ ಹೋಗುತ್ತಿದ್ದಾಗ ನ್ಯೂ ಜಲ್ಪೈಗುರಿ ಮತ್ತು ರಂಗಪಾಣಿ ರೈಲು ನಿಲ್ದಾಣಗಳ ನಡುವೆ ಹಿಂಬದಿಯಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇದುವರೆಗೆ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.
ಸುಮಾರು 50 ಮಂದಿ ಗಾಯಗೊಂಡಿರುವ ಸಾಧ್ಯತೆ ಇದೆ. ಹೆಚ್ಚಿನ ಸಂಖ್ಯೆಯ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಸೀಲ್ಡಾ ಪೂರ್ವ ರೈಲ್ವೇ ಅಧಿಕಾರಿಗಳು ರಂಗಪಾಣಿ ರೈಲು ನಿಲ್ದಾಣದಲ್ಲಿ ಸಹಾಯವಾಣಿ ಡೆಸ್ಕ್ ಅನ್ನು ಸ್ಥಾಪಿಸಿದ್ದಾರೆ.

Advertisement

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ ಎಂದು ಅವರು ತಿಳಿಸಿದ್ದಾರೆ. ಈ ರೈಲು ಅಪಘಾತ ಆಘಾತ ತಂದಿದೆ. ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ರಕ್ಷಣಾ ತಂಡಗಳು ತಕ್ಷಣವೇ ಘಟನಾ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧಾಧಾರಿತವಾಗಿ ಆರಂಭಿಸಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಪರಿಹಾರ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ದೀದಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಆದರೆ ಒಂದೇ ಹಳಿಯಲ್ಲಿ ಎರಡು ರೈಲುಗಳು ಬಂದಿದ್ದರಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಬರುವ ಮಾರ್ಗದಲ್ಲಿಯೇ ಬಂದ ಗೂಡ್ಸ್‌ ರೈಲು ಸಿಗ್ನಲ್‌ ಕಡೆ ಗಮನ ಹರಿಸದೆ ಮುಂದೆ ಹೋದಾಗ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ರೈಲ್ವೇ ಸಚಿವೆ ಅಶ್ವಿನಿ ವೈಷ್ಣವ್ ಇದೇ ವಿಷಯವನ್ನು ತಿಳಿಸಿದ್ದಾರೆ.

ಈ ಕಾಂಚನಜುಂಗಾ ಎಕ್ಸ್‌ಪ್ರೆಸ್ ಈಶಾನ್ಯ ನಗರಗಳಾದ ಸಿಲ್ಚಾರ್ ಮತ್ತು ಅಗರ್ತಲಾವನ್ನು ಬಂಗಾಳದೊಂದಿಗೆ ಸಂಪರ್ಕಿಸಲು ಪ್ರತಿನಿತ್ಯ ಪ್ರಯಾಣಿಸುತ್ತದೆ. ಚಿಕನ್ ನೆಕ್ ಕಾರಿಡಾರ್‌ನ ಭಾಗವಾಗಿರುವ ಈ ಮಾರ್ಗದಲ್ಲಿ ಇಂದು ಅಪಘಾತ ಸಂಭವಿಸಿದೆ. ಈಶಾನ್ಯ ಭಾರತವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಈ ಮಾರ್ಗವನ್ನು ಚಿಕನ್ ನೆಕ್ ಎಂದು ಕರೆಯಲಾಗುತ್ತದೆ. ಅಪಘಾತದಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಡಾರ್ಜಿಲಿಂಗ್‌ಗೆ ಹೋಗುವ ಪ್ರವಾಸಿಗರು ಹೆಚ್ಚಾಗಿ ಈ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಾರೆ.

Advertisement
Tags :
Advertisement