Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

TV5 ಔಟ್ ಪುಟ್ ಹೆಡ್ ಗಣೇಶ್ ನಿಧನ : ದುಃಖದಲ್ಲಿ ಮಾಧ್ಯಮ ಸ್ನೇಹಿತರು

02:08 PM Oct 10, 2024 IST | suddionenews
Advertisement

ಬೆಂಗಳೂರು : ಕನ್ನಡ ಪತ್ರಿಕಾರಂಗದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಪತ್ರಕರ್ತ ಗಣೇಶ್‌ ಇಂದು ಇಹ ಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

Advertisement

ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ್ಮ ದಂಪತಿ ಪುತ್ರರಾಗಿದ್ದ ಗಣೇಶ್‌ ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.

ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌ ಅವರ ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಸ್ತೂರಿ, ನ್ಯೂಸ್‌‍ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್‌ ಅವರು ಪ್ರಸ್ತುತ ಟಿವಿ 5 ನಲ್ಲಿ ಔಟ್ ಪುಟ್ ‌ ಚೀಫ್‌ ಅಗಿ ಸೇವೆ ಸಲ್ಲಿಸುತ್ತಿದ್ದರು.

Advertisement

ಗಣೇಶ್‌ ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್‌‍ ಕ್ಲಬ್‌, ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ವರದಿಗಾರರ ಕೂಟ ಕಂಬನಿ ಮಿಡಿದಿದೆ. ಅದೇ ರೀತಿ ಹಲವಾರು ಗಣ್ಯರು, ಹಿರಿಯ ಪೊಲೀಸ್‌‍ ಅಧಿಕಾರಿಗಳು ಗಣೇಶ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Advertisement
Tags :
bengaluruchitradurgaGanesh passes awaysuddionesuddione newsTV5TV5 output headಔಟ್ ಪುಟ್ ಹೆಡ್ಗಣೇಶ್ ನಿಧನಚಿತ್ರದುರ್ಗಬೆಂಗಳೂರುಮಾಧ್ಯಮ ಸ್ನೇಹಿತರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article