For the best experience, open
https://m.suddione.com
on your mobile browser.
Advertisement

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯ..!

05:28 PM Dec 11, 2024 IST | suddionenews
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯ
Advertisement

ಬೆಂಗಳೂರು: ಬೆಳಗಾವಿ ಅಧಿವೇಶನದ ನಡುವೆಯೇ ಪಂಚಮಸಾಲಿ ಸಮುದಾಯ ಬೃಹತ್ ಮಟ್ಟದಲ್ಲಿ ಪ್ರತಿಭಟನೆಯನ್ನು ನಡೆಸಿದೆ. ಸಾವಿರಾರು ಸಂಖ್ಯೆಯಲ್ಲಿ ಎಂಟ್ರಿ ಕೊಟ್ಟ ಪಂಚಮಸಾಲಿ ಸಮುದಾಯದವರು ಮೀಸಲಾತಿಗಾಗಿ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ಕೂಡ ನಡೆದಿದೆ. ಹಲವರನ್ನು ವಶಕ್ಕೂ ಪಡೆದುಕೊಂಡಿದ್ದಾರೆ. ಇದರಿಂದ ಪಂಚಮಸಾಲಿ ಸಮುದಾಯದವರು ಇನ್ನಷ್ಟು ರೊಚ್ಚಿಗೆದ್ದಿದ್ದಾರೆ. ಇದರ ನಡುವೆಯೇ ಹಿಂದುಳಿದ ಜಾತಿಗಳ ಒಕ್ಕೂಟವೊಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಈ ಪತ್ರದಲ್ಲಿ ಮೀಸಲಾತಿ ನೀಡದಂತೆ ಒತ್ತಾಯಿಸಿದೆ.

Advertisement

ಹಿಂದುಳಿದ ಜಾತಿಗಳ ಒಕ್ಕೂಟ ಬರೆದ ಪತ್ರದಲ್ಲಿ, 'ನಮ್ಮ ರಾಜ್ಯದಲ್ಲಿ 2002ರಿಂದ ಹಿಂದುಳಿದ ವರ್ಗಗಳನ್ನು ಪ್ರಚರ್ಗ-1, ಪ್ರವರ್ಗ-2, ಪ್ರವರ್ಗ-2A, ಪ್ರವರ್ಗ-2ಬಿ, ಪ್ರವರ್ಗ-3A, ಪ್ರವರ್ಗ-3ಬಿ ಎಂಬುದಾಗಿ ವಿಂಗಡಿಸಿ ಉದ್ಯೋಗ ಮತ್ತಯ ಶಿಕ್ಷಣದಲ್ಲಿ ಮೀಸಲಾತಿಯ ಶೇಕಡಾ 32 ರಷ್ಟು ಮೀಸಲಾತಿಯನ್ನು ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಲಾಗಿದೆ. 2002ರಿಂದ ಈವರೆಗೂ ಅದೇ ರೀತಿಯ ಮೀಸಲಾತಿಯನ್ನು ಹಿಂದುಳಿದ ವರ್ಗಗಳು ರಾಜ್ಯದಲ್ಲಿ ಪಡೆಯುತ್ತಿವೆ. ರಾಜ್ಯದಲ್ಲಿನ ಪಂಚಮಸಾಲಿ ಲಿಂಗಾಯತರು ಕೂಡ ಉಲ್ಲೇಕ-2ರ ಸರ್ಕಾರದ ಆದೇಶದ ಅನ್ವಯ ಪ್ರವರ್ಗ-3ಬಿ ಮೀಸಲಾತಿಯನ್ನು ಪಡೆಯುತ್ತಿದ್ದು, ಇತ್ತೀಚೆಗೆ ಈ ಸಮುದಾಯವನ್ನು ಶೇಕಡಾ 15ರಷ್ಟರ ಮೀಸಲಾತಿಯಡಿಯಲ್ಲಿ 2ಎ ಮೀಸಲಾತಿಗೆ ಸೇರಿಸಲು ಸರ್ಕಾರಕ್ಕೆ ಮನವಿ ಮಾಡಿ, ಒತ್ತಡ ಹಾಕುತ್ತಿದ್ದಾರೆ.

Advertisement

ಯಾವುದೇ ಕಾರಣಕ್ಕೂ ಲಿಂಗಾಯತ ಸಮುದಾಯವನ್ನು ಪ್ತವರ್ಗ-2ಎ ಮೀಸಲಾತಿಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವೂ ಮನವಿ ಮಾಡಿದೆ. ಒಂದು ವೇಳೆ ಮೀಸಲಾತಿಗೆ ಸೇರಿಸಿದ್ದೆ ಆದರೆ ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ‌ ಮಾಡಲಿದೆ ಎಂದು ಎಚ್ಚರಿಕೆ ನೀಡಿದೆ.

Tags :
Advertisement