For the best experience, open
https://m.suddione.com
on your mobile browser.
Advertisement

ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಿ : ದಿನೇಶ್ ಪೂಜಾರಿ

06:08 PM Mar 26, 2024 IST | suddionenews
ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಿ   ದಿನೇಶ್ ಪೂಜಾರಿ
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಜೀವ ಜಲ ಅಮೂಲ್ಯವಾದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಹೇಳಿದರು.

Advertisement

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ನಗರ ಸಿ. ವಲಯದ ಕಾಮನಬಾವಿ ಬಡಾವಣೆ ಕಾರ್ಯಕ್ಷೇತ್ರದಲ್ಲಿ ವಿಶ್ವಜಲದಿನ ಉದ್ಗಾಟಿಸಿ ಮಾತನಾಡಿದರು.

ಸಕಲ ಜೀವರಾಶಿಗಳಿಗೂ ನೀರು ಬೇಕು. ಮಾನವನಿಗೆ ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ನೀರು ಬೇಕೆ ಬೇಕು. ಮಳೆ ನೀರನ್ನು ಹರಿದು ಹೋಗಲು ಬಿಡದೆ ಭೂಮಿಯಲ್ಲಿ ಇಂಗಿಸುವ ಕೆಲಸವಾದಾಗ ಅಂತರ್ಜಲ ಮಟ್ಟ ಹೆಚ್ಚಲಿದೆ. ರಾಜ್ಯಾದ್ಯಂತ ನಾಲ್ಕು ನೂರು ಶುದ್ದ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. 714 ಕೆರೆಗಳ ಹೂಳೆತ್ತಲಾಗಿದೆ. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏಳು ಲಕ್ಷ ಸಸಿಗಳನ್ನು ನಾಟಿ ಮಾಡಲಾಗಿದೆ. ಗಿಡ-ಮರಗಳನ್ನು ಕಡಿದು ಪರಿಸರವನ್ನು ನಾಶಪಡಿಸುವುದರಿಂದ ಸಕಾಲಕ್ಕೆ ಮಳೆಯಾಗುವುದಿಲ್ಲ. ಹಾಗಾಗಿ ಪ್ರತಿಯೊಬ್ಬರು ಪರಿಸರವನ್ನು ಕಾಪಾಡಬೇಕಾಗಿದೆ ಎಂದು ತಿಳಿಸಿದರು.

ಈಗಿನಿಂದಲೇ ನೀರನ್ನು ಉಳಿತಾಯ ಮಾಡಿದರೆ ಮುಂದಿನ ಪೀಳಿಗೆಗೆ ಜಲವನ್ನು ಸಂರಕ್ಷಿಸಬಹುದು. ನಲ್ಲಿ ಮತ್ತು ಪೈಪ್‍ಗಳಲ್ಲಿ ನೀರು ಸೋರಿಕೆಯಾಗುತ್ತಿರುತ್ತದೆ. ಮನೆಯಲ್ಲಿ ಬಳಕೆಯಾಗುವ ನೀರನ್ನು ಚರಂಡಿಗೆ ಬಿಡದೆ ಗಿಡ ಮರಗಳಿಗೆ ಸೇರುವಂತೆ ಹಿಂಗುಗುಂಡಿ ಮಾಡಿಕೊಳ್ಳಬೇಕು. ಮಳೆ ನೀರು, ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು ಎಂದರು.

ಜನಜಾಗೃತಿ ವೇದಿಕೆ ಸದಸ್ಯೆ ಶ್ರೀಮತಿ ರೂಪ ಜನಾರ್ಧನ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಧಾ ಇನ್ನು ಅನೇಕು ವೇದಿಕೆಯಲ್ಲಿದ್ದರು.

Tags :
Advertisement