For the best experience, open
https://m.suddione.com
on your mobile browser.
Advertisement

ವಾಲ್ಮೀಕಿ ನಿಗಮದ ಅವ್ಯವಹಾರ : ಸರ್ಕಾರದ ಮೊದಲ ವಿಕೆಟ್ ಪತನ..!

03:56 PM Jun 06, 2024 IST | suddionenews
ವಾಲ್ಮೀಕಿ ನಿಗಮದ ಅವ್ಯವಹಾರ   ಸರ್ಕಾರದ ಮೊದಲ ವಿಕೆಟ್ ಪತನ
Advertisement

ಬೆಂಗಳೂರು: ವಾಲ್ಮೀಕಿ ನಿಗಮದದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸಂಬಂಧಪಟ್ಟ ಇಲಾಖೆಯ ಸಚಿವರ ರಾಜೀನಾಮೆಗೆ ವಿಪಕ್ಷಗಳು ಅಗ್ರಹಿಸಿದ್ದರು. ಇದೀಗ ಸರ್ಕಾರದ ಮೊ ವಿಕೆಟ್ ಪತನವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಮಾಹಿತಿ ನೀಡಿದ್ದಾರೆ.

Advertisement

Advertisement

ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದ ಹಿನ್ನಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು ಇಲ್ಲವೇ ಸಂಪುಟದಿಂದ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಗೌರವಾನ್ವಿತ ರಾಜ್ಯಪಾಲರಿಗೆ ದೂರು ಸಲ್ಲಿಸಲಾಯಿತು. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪರಿಶಿಷ್ಟ ಪಂಗಡದ ಹಿತಾಸಕ್ತಿಗೆ ದ್ರೋಹ ಬಗೆದು ಹಣ ದುರುಪಯೋಗ ಮಾಡಿಕೊಂಡಿರುವುದರ ವಿರುದ್ಧ ಹಾಗೂ ಅಮೂಲ್ಯ ಜೀವವೊಂದು ಆತ್ಮಹತ್ಯೆಗೆ ಈಡಾಗಿರುವುದರ ಕುರಿತು ಎಳ್ಳಷ್ಟೂ ತಲೆ ಕೆಡಿಸಿಕೊಳ್ಳದ ಮುಖ್ಯಮಂತ್ರಿಗಳ ನಡೆ ಪ್ರಕರಣದ ಕುರಿತು ಜನರಲ್ಲಿ ಹೆಚ್ಚು ಸಂಶಯ ಮೂಡಲು ಕಾರಣವಾಗಿದೆ, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆದು ತನಿಖೆ ಪಾರದರ್ಶಕವಾಗಿ ನಡೆಯಲು ಸರ್ಕಾರ ಸಹಕಾರ ನೀಡದಿದ್ದರೆ ಬಿಜೆಪಿ ಹೋರಾಟವನ್ನು ತೀವ್ರ ಗೊಳಿಸಲಿದೆ ಎಂದು ಬಿಜೆಪಿಗರು ಎಚ್ಚರಿಕೆ ಕೊಟ್ಟಿದ್ದರು.

Advertisement

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಕಾಂಗ್ರೆಸ್‌ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು. ಹೀಗಾಗಿ ಸ್ವಯಂಪ್ರೇರಿತರಾಗಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯ ಇರಲಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದಿದ್ದಾರೆ.

Advertisement

Advertisement
Tags :
Advertisement