ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ : 10ಕ್ಕೂ ಹೆಚ್ಚು ಕಡೆ ಇಡಿ ದಾಳಿ.. 8 ಗಂಟೆ ನಾಗೇಂದ್ರ ಅವರ ವಿಚಾರಣೆ..!
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದ್ದು, ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದ್ದಾರೆ. ಪ್ರಕರಣದ ಎಲ್ಲಾ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದೆ. ಬೆಳಗ್ಗೆ 6 ಗಂಟೆಯಿಂದಾನೇ ದಾಳಿ ಆರಂಭವಾಗಿದ್ದು ಬೆಂಗಳೂರು, ಬಳ್ಳಾರಿ, ರಾಯಚೂರು ಮತ್ತು ಹಾವೇರಿ ಕಡೆಯಲ್ಲಿ ದಾಳಿ ನಡೆಸಿದ್ದಾರೆ. ನಿನ್ನೆಯೇ ಬಿ.ನಾಗೇಂದ್ರ ಅವರು ಸುಮಾರು 8 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು.
ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್, ಪದ್ಮನಾಭ, ಪರಶುರಾಮ ಮತ್ತು ಬ್ಯಾಂಕ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬರೋಬ್ಬರಿ 187 ಕೋಟಿಯ ಬಹುದೊಡ್ಡ ಹಗರಣವಾಗಿದ್ದು ಅದರಲ್ಲಿ 94 ಕೋಟಿ ಹೈದ್ರಾಬಾದ್ ಗೆ ಟ್ರಾನ್ಸಫರ್ ಆಗಿದೆ. ನಕಲಿ ಕಂಪನಿಗಳಿಗೆ ನಕಲಿ ಅಮೌಂಟ್ ಮೂಲಕ ಟ್ರಾನ್ಸಫರ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಲೆಕ್ಕವಿಲ್ಲದೆ ಅಕ್ರಮ ಜಣ ವರ್ಗಾವಣೆ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಯಚೂರು ನಗರದ ಆರ್ ಆರ್ ಕಾಲೋನಿಯಲಗಲಿರುವ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಸದಸ್ಯರ ಮೊಬೈಲ್ ಎಲ್ಲಾ ಸೀಜ್ ಮಾಡಿ ದಾಳಿ ನಡೆಸಲಾಗಿದೆ. ಇನ್ನು ಈ ಅಕ್ರಮ ನಡೆದಾಗ ಬಿ.ನಾಗೇಂದ್ರ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು. ಬಸನಗೌಡ ದದ್ದಲ್ ಅವರು ಈಗಲೂ ವಾಲ್ಮೀಕಿ ನಿಗಮದ ಅಧ್ಯಕ್ಷರೇ ಆಗಿದ್ದಾರೆ. ಹೀಗಾಗಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.