Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ : ಗಣ್ಯರಿಂದ ಸಂತಾಪ

12:25 PM Apr 16, 2024 IST | suddionenews
Advertisement

ಬೆಂಗಳೂರು, ಏಪ್ರಿಲ್. 16 : ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Advertisement

 

ದ್ವಾರಕೀಶ್ ಅವರು ಕನ್ನಡ ನಾಡಿನ ಕುಳ್ಳ ಎಂದೇ ಖ್ಯಾತಿಗಳಿಸಿದ್ದರು. ದ್ವಾರಕೀಶ್ ಅವರ ಪೂರ್ಣ ಹೆಸರು ಬಂಗ್ಲೆ ಶಾಮಾ ದ್ವಾರಕೀಶ್. 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಿಸಿದ್ದರು. ದ್ವಾರಕೀಶ್ ಅವರ ತಂದೆ ಶಮಾರಾವ್ ಮತ್ತು ತಾಯಿ ಜಯಮ್ಮ, ಪತ್ನಿ ಅಂಬುಜ.

Advertisement

ಇವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ್ದರು.

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು.

Advertisement
Tags :
bengaluruchitradurgacondolencesDwarkeeshkannadapasses awaySenior actorsuddionesuddione newsVeteranಕನ್ನಡಗಣ್ಯರುಚಿತ್ರದುರ್ಗದ್ವಾರಕೀಶ್ನಿಧನಬೆಂಗಳೂರುಸಂತಾಪಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯ ನಟ
Advertisement
Next Article