For the best experience, open
https://m.suddione.com
on your mobile browser.
Advertisement

ಜನೌಷಧ ರದ್ದು ನಿರ್ಧಾರಕ್ಕೆ ವಿಜಯೇಂದ್ರ ಕಿಡಿ : ಅನುಮತಿ ನಿರಾಕರಣೆಗೆ ಸ್ಪಷ್ಟನೆ ಕೊಟ್ಟ ಸಚಿವ

04:26 PM Aug 14, 2024 IST | suddionenews
ಜನೌಷಧ ರದ್ದು ನಿರ್ಧಾರಕ್ಕೆ ವಿಜಯೇಂದ್ರ ಕಿಡಿ   ಅನುಮತಿ ನಿರಾಕರಣೆಗೆ ಸ್ಪಷ್ಟನೆ ಕೊಟ್ಟ ಸಚಿವ
Advertisement

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಹೊಸದಾಗಿ ಜನೌಷಧ ಕೇಂದ್ರ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಕ್ರೋಶ ಹೊರ ಹಾಕಿದ್ದಾರೆ.

Advertisement
Advertisement

ದುಬಾರಿ ಔಷದಿಗಳು ಬಡಜನರ ಆರೋಗ್ಯದ ಹಕ್ಕು ಕಸಿಯಬಾರದು, ಜನಸಾಮಾನ್ಯರಿಗೂ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರಕಬೇಕೆಂಬ ಮಹತ್ವದ ಉದ್ದೇಶದಿಂದ ಪ್ರಧಾನಿ ಶ್ರೀ @narendramodi ಅವರು ಜನೌಷಧಿ ಕೇಂದ್ರ ಸ್ಥಾಪಿಸಿದರು. ಸದ್ಯ 8,900 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿಂದ ಪ್ರತಿದಿನ 20 ಲಕ್ಷ ಕ್ಕೂ ಹೆಚ್ಚು ಬಡ ಕುಟುಂಬಗಳು ಪ್ರಯೋಜನ ಪಡೆದುಕೊಳ್ಳುತ್ತಿವೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡುವುದಿಲ್ಲವೆಂಬ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಹೇಳಿಕೆ ಬಡವರ ಆರೋಗ್ಯದಲ್ಲೂ ರಾಜಕಾರಣದ ಚೆಲ್ಲಾಟವಾಡುವಂತಿದೆ. ಅನ್ನ, ಅಕ್ಷರ ಆರೋಗ್ಯದ ವಿಷಯದಲ್ಲೂ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿಯುತ್ತಿರುವ ರಾಜ್ಯದ @INCKarnataka ಸರ್ಕಾರದ ನಡೆ ಮಾನವೀಯ ಮೌಲ್ಯವಿಲ್ಲದ ಜನವಿರೋಧಿಯಲ್ಲದೇ ಬೇರೇನೂ ಅಲ್ಲ. ಖಾಸಗಿ ಲಾಭಿಗಳ ಒತ್ತಡ ಹಾಗೂ ಪ್ರಭಾವಗಳಿಗೆ ಮಣಿದು ಬಡವರಿಗೆ ದ್ರೋಹ ಬಗೆಯಲು ಹೊರಟರೆ @BJP4Karnataka ಕೈ ಕಟ್ಟಿ ಕೂರದು, ತಕ್ಷಣ ಸಚಿವರು ಹೇಳಿಕೆ ಹಿಂಪಡೆದು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜನೌಷಧಿ ಕೇಂದ್ರಗಳಿಗೆ ಅಡ್ಡಿಪಡಿಸುವ ನಿಲುವನ್ನು ಬದಲಿಸಿಕೊಳ್ಳುವಂತೆ ಆಗ್ರಹಿಸುತ್ತೇನೆ ಎಂದಿದ್ದಾರೆ.

ಈ ಸಂಬಂಧ ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದು, ಬಡವರಿಗೆ ಅನುಕೂಲವಾಗಲಿ ಎಂದು ಜನೌಷಧಕ್ಕೆ ಅನುಮತಿ ನೀಡುತ್ತಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತ ಔಷಧಿ ಕೊಡಬೇಕು. ಸ್ಟಾಕ್ ಇಲ್ಲದಿದ್ದರೂ ತರಿಸಿಕೊಡಬೇಕು. ಹೀಗಾಗಿ ನಾವೂ ಜನೌಷಧಿ ಕೇಂದ್ರ ಬೇಡ ಎಂದು ಹೇಳಿದ್ದಾರೆ.

Advertisement
Advertisement

Advertisement
Tags :
Advertisement