Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದೇವೇಗೌಡ್ರನ್ನ ಸೋಲಿಸಿದ್ದು ನಾನೇ ಎನ್ನುವ ಕೆ.ಎನ್.ರಾಜಣ್ಣ ತುಮಕೂರು ಸೋಲಿನ ಬಗ್ಗೆ ಹೇಳಿದ್ದೇನು..?

09:55 PM Jun 08, 2024 IST | suddionenews
Advertisement

ಹಾಸನ: ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರವೂ ಗಮನ ಸೆಳೆದಿತ್ತು. ವಿಧಾನಸಭಾ ಚುನಾವಣೆಯಲ್ಲಿ ಮೈಸೂರು, ಚಾಮರಾಜನಗರ ಜನತೆ ಸೋಲಿಸಿದ್ದ ವಿ.ಸೋಮಣ್ಷ ಅವರನ್ನು ತುಮಕೂರು ಜನತೆ ಕೈ ಹಿಡಿದಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಗೆದ್ದಿದ್ದಾರೆ. ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೋಲಿನ ಬಗ್ಗೆ ಮಾತನಾಡಿದ್ದಾರೆ. ನಾನು ಹಾಸನ ಜಿಲ್ಲಾ ಉಸ್ತುವಾರಿ. ಅಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನನ್ನ ಮೇಲಿತ್ತು ಎಂದಿದ್ದಾರೆ.

Advertisement

ಹಾಸನದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ನನ್ನ ಪಾತ್ರ ಹೆಚ್ಚಿರಲಿಲ್ಲ. ನನಗರ ಹಾಸನದ ಚುನಾವಣೆಯ ಜವಾಬ್ದಾರಿಯನ್ನು ಕೊಟ್ಟಿದ್ದರು. ತುಮಕೂತಿಹೆ ನಾನು, ಪರಮೇಶ್ವರ್ ಮಂತ್ರಿಗಳಾಗಿದ್ದೇವೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲಿಲ್ಲ ಎಂದರೆ ಹಾಸನಕ್ಕೆ ಬರಲ್ಲ ಎಂದು ಹೇಳಿದ್ದೆ. ಗೆಲ್ಲಿಸಿಕೊಟ್ಟಿದ್ದಾರೆ ಎಂದಿದ್ದಾರೆ.

ಜಿಲ್ಲೆಯಲ್ಲಿ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ, ಎಲ್ಲಾ ಪಕ್ಷ, ಜಾತಿಯವರು ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಹೆಚ್ಚಿನ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಬೇಕು. ನಾನೇ ಗೆಲ್ಲಿಸಿದ್ದೀನಿ ಅಂತಾ ಹೇಳಿದ್ರೆ, ಅದು ದುರಂಹಕಾರದ ಮಾತಾಗುತ್ತೆ. ಕಳೆದ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಎರಡು ಸಾವಿರ ಓಟು ಇರಲಿಲ್ಲ, ನಾನು ಅವರಿಗೆ ಎಂಭತ್ತು ಸಾವಿರ ಓಟು ಕೊಡಿಸಿದ್ದೆ. ಅದಕ್ಕೆ ಅವರು ಸೋತರು. ದೇವೇಗೌಡರು ಸೋಲಲು ನಾನೇ ಕಾರಣ, ನಾನೇ ಸೋಲಿಸಿದ್ದು ಅದರಲ್ಲಿ ಅನುಮಾನ ಏನಿಲ್ಲ ಎಂದು ಮತ್ತೆ ತಿಳಿಸಿದ್ದಾರೆ.

Advertisement

Advertisement
Tags :
bengaluruchitradurgaHD Devegowdasuddionesuddione newstumkurಕೆ ಎನ್ ರಾಜಣ್ಣಚಿತ್ರದುರ್ಗತುಮಕೂರುದೇವೇಗೌಡ್ರಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹೆಚ್ ಡಿ ದೇವೇಗೌಡ
Advertisement
Next Article