ಬಿಜೆಪಿ ಜೊತೆಗೆ ಜೆಡಿಎಸ್ ಕೈಜೋಡಿಸಿದ್ದು ಯಾಕೆ..? ಕುಮಾರಸ್ವಾಮಿ ಕೊಟ್ರು ಸ್ಪಷ್ಟ ಉತ್ತರ..!
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಕೈ ಜೋಡಿಸಿದೆ. ಆದರೆ ಎರಡು ಪಕ್ಷದ ತತ್ವ ಸಿದ್ಧಾಂತ ವಿರುದ್ಧವಾದಂತವೂ. ಆದರೂ ಕೈಜೋಡಿಸಿದ್ದು ಹೇಗೆ ಎಂಬ ಪ್ರಶ್ನೆಗಳು ಕಾಡಿದ್ದು, ಒಬ್ಬಿಬ್ಬರನ್ನಲ್ಲ. ಬಿಜೆಪಿ ಜೊತೆಗೆ ಕೈ ಜೋಡಿಸುವುದಕ್ಕೆ ಏನು ಕಾರಣ ಎಂಬುದನ್ನು ಕುಮಾರಸ್ವಾಮಿ ಅವರೇ ತಿಳಿಸಿದ್ದಾರೆ.
ಇಂದು ನವದೆಹಲಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ 45 ನಿಮಿಷಗಳ ಕಾಲ ಚರ್ಚೆ ಮಾಡಲಾಯಿತು. ಈ ವೇಳೆ ಕಾಂಗ್ರೆಸ್ ನ ವಿಫಲತೆ, ರೈತರ ಸಮಸ್ಯೆ, ಬರಗಾಲದಬಕುರಿತಾಗಿ ಸಾಕಷ್ಟು ಚರ್ಚೆ ಮಾಡಿದ್ದೇವೆ. ಈ ಬಾರಿಯ ಎಲೆಕ್ಷನ್ ನಲ್ಲಿ 28ಕ್ಕೆ 28 ಸ್ಥಾನ ಗೆಲ್ಲುವುದು ನಮಗೆ ಮುಖ್ಯವಾಗಿದೆ. ರಾಜ್ಯದ ಪ್ರಗತಿಗಾಗಿ ಎನ್‌ಡಿಎ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡರ ಮೇಲೆ ಅಪಾರವಾದಂತ ಗೌರವವಿದೆ.
ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಗೆಲ್ಲುತ್ತದೆ..? ದೌರ್ಬಲ್ಯವೇನು ಎಂಬುದರ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಬಳಿಕ ಕ್ಷೇತ್ರ ಹಂಚಿಕೆಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಚುನಾವಣೆಗೆ ಇನ್ನು ಕೇಲವ ಎರಡು ತಿಂಗಳು ಇದೆ. ಈಗ ಕೇಂದ್ರದ ಮಂತ್ರಿಯಾಗಿ ನಾನೇನು ಮಾಡುವುದಕ್ಕೆ ಇದೆ. ಇದು ಯಾವ ಮೂಲದಿಂದ ಸುದ್ದಿ ಬಂತೋ ನನಗಂತೂ ಗೊತ್ತಿಲ್ಲ ಎಂದು ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.