ಬಿಎಸ್ವೈ ಕುಟುಂಬದ ಬಗ್ಗೆ ಆಕ್ರೋಶದ ಮಾತಾಡುವ ಯತ್ನಾಳ್ ವಿರುದ್ಧ ಶಿಸ್ತುಕ್ರಮ ಯಾಕಿಲ್ಲ..? ಆರ್ ಅಶೋಕ್ ಹೇಳಿದ್ದೇನು..?
ಮೈಸೂರು: ಯಾರಾದರೂ ತಮ್ಮ ಪಕ್ಷದವರ ವಿರುದ್ಧವೇ ಮಾತನಾಡುತ್ತಿದ್ದರೆ, ಪಕ್ಷಕ್ಕೆ ಮುಜುಗರ ತರುವಂತೆ ಮಾಡುತ್ತಿದ್ದರೆ. ಅಂಥವರ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮ ಜರುಗಿಸುತ್ತದೆ. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದವರ ವಿರುದ್ಧವೇ ಮಾತನಾಡುತ್ತಾ ಇರುತ್ತಾರೆ. ಅದರಲ್ಲೂ ಬಿಎಸ್ ಯಡಿಯೂರಪ್ಪ ಕುಟುಂಬದವರ ವಿರುದ್ದವೇ ಏಕವಚದಲ್ಲಿಯೇ ವಾಗ್ದಾಳಿ ನಡೆಸುತ್ತಿರುತ್ತಾರೆ. ಆದ್ರೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಯಾಕಿಲ್ಲ ಎಂಬ ಪ್ರಶ್ನೆ ಇದಾವೆ. ಈ ಬಗ್ಗೆ ಇದೀಗ ವಿಪಕ್ಷ ನಾಯಕ ಆರ್.ಅಶೋಕ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಪಾದಯಾತ್ರೆ ಇಂದು ಮೈಸೂರಿಗೆ ಬಂದಿದ್ದು, ಈ ವೇಳೆ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ವಿರುದ್ಧ ನಾವೂ ಕ್ರಮ ಕೈಗೊಳ್ಳುವುದಕ್ಕೆ ಸಾಧ್ಯವಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರದಲ್ಲಿ ಮಂತ್ರಿಯಾಗಿದ್ದವರು. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸಾಧ್ಯವಿಲ್ಲ. ಈಗಾಗಲೇ ಕೇಂದ್ರದ ನಾಯಕರು ಎರಡು ಬಾರಿ ಕರೆಸಿ ಮಾತನಾಡಿದ್ದಾರೆ. ಮುಂದಿನ ವಾರ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿಗಳು ಆಗಮಿಸಲಿದ್ದಾರೆ. ಆಗ ಯತ್ನಾಳ್ ಅವರನ್ನು ಕರೆಸಿ ಮಾತನಾಡುತ್ತಾರೆ. ಆ ನಂತರದಲ್ಲಿ ಏನು ಮಾಡುವುದು ಎಂದು ನಾವೂ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಈ ಮೂಲಕ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಕ್ಕೆ ಆಗಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಮೂಡಾ ಹಗರಣ ಸಂಬಂಧ ಬಿಜೆಪಿ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಘೋಷಣೆ ಮಾಡಿದಾಗಲೆ ವಿಜಯೇಂದ್ರ ನಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸ್ಪೋಟಕ ಹೇಳಿಕೆ ನೀಡಿದ್ದರು. ವಿಜಯೇಂದ್ರ ಅವರು ಪಕ್ಷದ ಹಿತಾಸಕ್ತಿಗಾಗಿ ಪಾದಯಾತ್ರೆ ನಡೆಸುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು.