ಮುದ್ದಹನುಮೇಗೌಡರ ಎದುರು ಸ್ಪರ್ಧಿಸ್ತಾರಾ ವಿ ಸೋಮಣ್ಣ : ತುಮಕೂರು ಅಭ್ಯರ್ಥಿಗಳು ಇವರೇನಾ..?
ತುಮಕೂರು: ಲೋಕಸಭಟ ಚುನಟವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ದಿನಾಂಕ ಅನೌನ್ಸ್ ಆಗುವುದೊಂದೆ ಬಾಕಿ. ಅದಕ್ಕಾಗಿಯೇ ಟಿಕೆಟ್ ಆಕಾಂಕ್ಷಿಗಳು ಅದಾಗಲೇ ಜನರ ಬಳಿಗೆ ಓಡಾಟ ನಡೆಸುತ್ತಿದ್ದಾರೆ. ಸಮಸ್ಯೆಗಳನ್ನು ಕೇಳುತ್ತಿದ್ದಾರೆ. ಇನ್ನು ಯಾವ ಪಕ್ಷದಲ್ಲೂ ಅಭ್ಯರ್ಥಿಗಳ ಫೈನಲ್ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಇದರ ಮಧ್ಯೆ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಮಾತನಾಡಿದ ಕೆ ಎನ್ ರಾಜಣ್ಣ, ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಭಾಗದಲ್ಲಿ ಕಾಂಗ್ರೆಸ್ ನ ಎಸ್ ಪಿ ಮುದ್ದಹನುಮೇಗೌಡ ಅವರು ಬಿಜೆಪಿಯ ವಿ ಸೋಮಣ್ಣ ಅವರೊಂದಿಗೆ ಕಣಕ್ಕೆ ಇಳಿಯಲಿದ್ದಾರೆ. ವಿ ಸೋಮಣ್ಣ ಅವರಿಗೆ ಬಿಜೆಪಿ ತುಮಕೂರು ಟಿಕೆಟ್ ನೀಡಲಿದೆ ಎಂಬ ಮಾಹಿತಿ ನನಗೆ ಇದೆ. ಕಾಂಗ್ರೆಸ್ ಮುದ್ದಹನುಮೇಗೌಡರನ್ನು ಕಣಕ್ಕೆ ಇಳಿಸಲಿದೆ ಎಂದಿದ್ದಾರೆ.
ಇದೇ ವೇಳೆ ದಲಿತ ಸಿಎಂ ಬಗ್ಗೆಯೂ ಮಾತನಾಡಿ, ಎಚ್ ಸಿ ಮಹದೇವಪ್ಪ ಅವರು ದಲಿತ ಸಿಎಂ ಬೇಕು ಎಂಬ ಬೇಡಿಕೆ ಮುಂದಿಡುವುದರಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿ ಬದಲಾವಣೆಯಾದರೆ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಲಿ. ದಲಿತರನ್ನು ಸಿಎಂ ಮಾಡಲಿ ಎಂದು ಇಷ್ಟು ವರ್ಷಗಳ ಕಾಲ ಒತ್ತಾಯ ಮಾಡುತ್ತಲೆ ಬಂದಿದ್ದೀವಿ ಎಂದಿದ್ದಾರೆ.
ಇನ್ನು ತುಮಕೂರು ಲೋಕಸಭೆಗೂ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷ ಇನ್ನು ಅಭ್ಯರ್ಥಿಗಳ ಹೆಸರನ್ನು ಫೈನಲ್ ಆಗಿ ಹೇಳಿಲ್ಲ. ಆದರೆ ವಿಧಾನಸಭೆಯಲ್ಲಿ ಸೋತ ಸೋಮಣ್ಣ ಅವರು ತುಮಕೂರು ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದು, ತುಮಕೂರಿನಲ್ಲಿ ಸಂಚಾರ ನಡೆಸುತ್ತಿದ್ದಾರೆ. ಆದರೆ ತುಮಕೂರಿನಲ್ಲಿ ಬಿಜೆಪಿ ನಾಯಕರೇ ವಿ ಸೋಮಣ್ಣ ಅವರ ಸ್ಪರ್ಧೆಗೆ ನಿರಾಕರಣೆ ಮಾಡಿದೆ.