For the best experience, open
https://m.suddione.com
on your mobile browser.
Advertisement

ಸಂವಿಧಾನದ ಆಶಯಗಳು ಭಾವನಾತ್ಮಕ ಆಚರಣೆಗೆ ಸೀಮಿತವಾಗದಿರಲಿ: ಡಾ. ಎಂ. ಎಸ್. ಶೇಖರ್

08:25 PM Nov 26, 2024 IST | suddionenews
ಸಂವಿಧಾನದ ಆಶಯಗಳು ಭಾವನಾತ್ಮಕ ಆಚರಣೆಗೆ ಸೀಮಿತವಾಗದಿರಲಿ  ಡಾ  ಎಂ  ಎಸ್  ಶೇಖರ್
Advertisement

Advertisement

ಶಂಕರಘಟ್ಟ, ನ. 26: ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಂವಿಧಾನದ ಆಶಯಗಳನ್ನು ಭಾವನಾತ್ಮಕ ಮಾತುಗಳಿಗೆ ಸೀಮಿತಗೊಳಿಸದೆ, ಬದ್ಧತೆಯೊಂದಿಗೆ ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆಯನ್ನು ನಾವೆಲ್ಲರೂ ನಿರ್ವಹಿಸಬೇಕೆಂದು ಸಾಹಿತಿ ಮತ್ತು ಚಿಂತಕ ಡಾ. ಎಂ. ಎಸ್. ಶೇಖರ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಜ್ಞಾನಸಹ್ಯಾದ್ರಿಯ ಬಸವ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ 75ನೇ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ಈ ಹೊತ್ತು ದೇಶದ ಉದ್ದಗಲಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸಂಘ ಸಂಸ್ಥೆಗಳು ಸಂವಿಧಾನ ದಿನಾಚರಣೆಯನ್ನು ಆಚರಿಸುತ್ತಿರುವುದು ಅಭಿನಂದನಾರ್ಹ. ಆದರೆ, ಇದು ಆಡಂಬರ, ಮೋಡಿಯ ಮಾತುಗಳು ಮತ್ತು ಆಚರಣೆಗಳಿಗೆ ಸೀಮಿವಾಗಿದೆ ಎಂದು ವಿಷಾದಿಸಿದರು.

ಸಂವಿಧಾನ ಪ್ರಜಾಪ್ರಭುತ್ವದ ಅನುಷ್ಠಾನದ ಶಾಸನಾತ್ಮಕ ಗ್ರಂಥ ಮಾತ್ರವಲ್ಲ, ಇದು ದೇಶದ ಪ್ರತಿಯೊಬ್ಬ ಪ್ರಜೆಯ ಆತ್ಮಸಾಕ್ಷಿಯನ್ನು ಕಾಪಿಟ್ಟುಕೊಂಡಿರುವ ಮೇರು ಗ್ರಂಥ. ಭಾರತೀಯ ಸಂವಿಧಾನಕ್ಕೆ ಮೂಲ ಪ್ರೇರಣೆಯಾಗಿದ್ದು ಅಮೆರಿಕಾದ ಸಂವಿಧಾನ ಮತ್ತು ಫ್ರೆಂಚ್ ಕ್ರಾಂತಿ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತ ಮೂರ್ತಿ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಸಮಗ್ರವಾಗಿ ಸಂವಿಧಾನ ನಮಗೆ ಕೊಡಮಾಡಿರುವ ಸಾರ್ವತ್ರಿಕ ಮೌಲ್ಯಗಳು. ಇದರ ಜೊತೆಗೆ ಸಮಾಜವಾದ ಮತ್ತು ಧರ್ಮನಿರಪೇಕ್ಷತೆ ನಮಗೆ ಮಾರ್ಗದರ್ಶಿ ಸೂತ್ರವಾಗಬೇಕು ಎಂದರು.

ಕುಲಸಚಿವ ಎ. ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್, ಡಾ. ಧರ್ಮೇಗೌಡ, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ನೆಲ್ಲಿಕಟ್ಟೆ ಸಿದ್ಧೇಶ್, ವಿವಿಧ ವಿಭಾಗಗಳ ಅಧ್ಯಾಪಕರು, ಎಸ್ಎಂಆರ್ ಕಾಲೇಜಿನ ವಿದ್ಯಾರ್ಥಿಗಳು, ವಿವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Tags :
Advertisement