Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯಡಿಯೂರಪ್ಪ ಅವರಿಗೆ ಇಂದು ಜೈಲಾ..? ಬೇಲಾ..?

12:19 PM Jun 14, 2024 IST | suddionenews
Advertisement

ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿಎದ್ ಯಡಿಯೂರಪ್ಪ ಅವರು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಯಡಿಯೂರಪ್ಪ ಅವರಿಗೆ ಜೇಲಾ..? ಬೇಲಾ ಎಂಬುದು ತೀರ್ಮಾನವಾಗಲಿದೆ.

Advertisement

ನಿನ್ನೆಯಷ್ಟೇ ಬೆಂಗಳೂರಿನ ನ್ಯಾಯಾಲಯ ಯಡಿಯೂರಪ್ಪ ಅವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯಲು ಕಾಯುತ್ತಿದ್ದಾರೆ. ಇಂದು ಕೋರ್ಟ್ ಏನಾದರೂ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದರೆ ಯಡಿಯೂರಪ್ಪ ಅವರ ಬಂಧನವಾಗುವುದು ಗ್ಯಾರಂಟಿ ಎನ್ನಲಾಗಿದೆ.

ಇನ್ನು ಈ ಫೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಅವರ ಆಪ್ತರ ಮೇಲೆ ಸಾಕ್ಷ್ಯ ನಾಶ ಮಾಡಿದ ಆರೋಪವೂ ಇದೆ‌. ಅರುಣ್ ಹಾಗೂ ರುದ್ರೇಶ್ ಹಾಗೂ ಮರಿಸ್ವಾಮಿ ಎಂಬುವವರನ್ನೂ ಪ್ರಕರಣದ ಆರೋಪಿಗಳನ್ನಾಗಿ ತನಿಖಾ ತಂಡ ಗುರುತಿಸಿದೆ. ಸಾಕ್ಷಿಗಳನ್ನು ನಾಶ ಮಾಡಿರುವುದು, ಪ್ರಭಾವ ಬೀರಿದ ಹಿನ್ನಲೆಯಲ್ಲಿ ಅವರನ್ನು ಸಿಆರ್ಪಿಸಿ 41ರ ಅಡಿಯಲ್ಲಿ ಆರೋಪಿಗಳನ್ನಾಗಿ ಪರಿಗಣಿಸಿ ನೋಟೀಸ್ ಜಾರಿ ಮಾಡಲಾಗಿದೆ.

Advertisement

ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಪ್ರಕರಣ ದಾಖಲೊಸಿಕೊಂಡಿದ್ದ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸಾಕಷ್ಟು ಬಾರಿ ನೋಟೀಸ್ ನೀಡಿದರು ವಿಚಾರಣೆಗೆ ಹಾಜರಾಗದ ಯಡಿಯೂರಪ್ಪ ವಿರುದ್ಧ ಸಿಐಡಿ ಪೊಲೀಸರು, ನ್ಯಾಯಲಯದ ಮೊರೆ ಹೋಗಿದ್ದರು. ನ್ಯಾಯಾಲಯದಿಂದ ಬಂಧನದ ವಾರೆಂಟ್ ಪಡೆದುಕೊಂಡಿದ್ದರು. ಬಳಿಕ ಯಡಿಯೂರಪ್ಪ ಅವರು ಎಚ್ಚೆತ್ತುಕೊಂಡು ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಸಿಗದೆ ಹೋದಲ್ಲಿ ಯಡಿಯೂರಪ್ಪ ಅವರ ಬಂಧನವೂ ಆಗಲಿದೆ.

Advertisement
Tags :
bengaluruBS Yeddyurappachitradurgasuddionesuddione newsಚಿತ್ರದುರ್ಗಜೈಲಾಬೆಂಗಳೂರುಬೇಲಾಯಡಿಯೂರಪ್ಪಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article