Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

01:08 PM Oct 07, 2024 IST | suddionenews
Advertisement

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬೆಂಬಿಡದೆ ಮಳೆ ಸುರಿಯುತ್ತಲೆ ಇದೆ. ಇಂದು ಕೂಡ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ದಕ್ಷಿಣ ಒಳನಾಡಿನಲ್ಲಿ ಮಿಂಚು, ಗುಡುಗು ಸಮೇತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 9ರವರೆಗೂ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ 15 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Advertisement

 

ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚನೆ ನೀಡಿದೆ. ಬಹುತೇಕ ಜಿಲ್ಲೆಯಲ್ಲಿ ಬೆಳಗ್ಗೆಯಿಂದಾನೂ ಮೋಡ ಕವಿದ ವಾತಾವರಣ ಮನೆ ಮಾಡಿದೆ.

Advertisement

ಇಂದು ಬೆಳಗ್ಗೆಯಿಂದಾನೇ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಿದೆ. ಮೈಸೂರು, ಹೊನ್ನಾಳಿ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಾನೂ ಮಳೆ ಸುರಿದಿದೆ. ಒಂದೇ ಸಮನೆ ಮಳೆ ಸುರಿಯುತ್ತಿರುವ ಕಾತಣ ಜನ ಹೈರಾಣಾಗಿದ್ದಾರೆ.

ವಿಪರೀತ ಮಳೆಯಿಂದಾಗಿ ಕೆಲವೆಡೆ ಬೆಳೆ ನಾಶವಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕೇಳಿದರೇನೆ ತಲೆ ಸುತ್ತಿ ಬೀಳುವಂತೆ ಆಗಿದೆ. ದಿನೇ ದಿನೇ ತರಕಾರಿ, ಸೊಪ್ಪಿನ ಬೆಲೆ ಏರಿಕೆಯಾಗುತ್ತಲೆ ಇದೆ. ಪ್ರತಿದಿನ ಮಳೆ ಸುರಿಯುತ್ತಿರುವ ಕಾತಣ ಕೆಲಸಕ್ಕೆ ಹೋಗುವವರದ್ದು ಕಷ್ಟದ ಬದುಕಾಗಿ ಬಿಟ್ಟಿದೆ.

Advertisement
Tags :
bengaluruchitradurgadavanageresuddionesuddione newsYellow alertಚಿತ್ರದುರ್ಗದಾವಣಗೆರೆಬೆಂಗಳೂರುಯೆಲ್ಲೋ ಅಲರ್ಟ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article