ಇಂದು ಯುವ-ಶ್ರೀದೇವಿ ಡಿವೋರ್ಸ್ ಅರ್ಜಿ ವಿಚಾರಣೆ : ಕೋರ್ಟ್ ಗೆ ಹೋಗುವ ಮುನ್ನ ಶ್ರೀದೇವಿ ಪೋಸ್ಟ್
ಬೆಂಗಳೂರು: ದೊಡ್ಮನೆಯ ಕುಡಿ ಯುವ ರಾಜ್‍ಕುಮಾರ್ ದಾಂಪತ್ಯ ಜೀವನ ಅಂತ್ಯವಾಗುವ ಸಮಯವಿದು. ಇಂದು ಕೋರ್ಟ್ ನಲ್ಲಿ ನಿರ್ಣಾಯಕ ದಿನವಾಗಿದೆ. ಜೂನ್ 6 ರಂದು ಯುವ ರಾಜ್‍ಕುಮಾರ್ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಯುವ ರಾಜ್‍ಕುಮಾರ್ ಹಾಗೂ ಶ್ರೀದೇವಿ ಇಬ್ಬರು ಕೋರ್ಟ್ ಗೆ ಹಾಜರಾಗಲಿದ್ದಾರೆ.
ಕೋರ್ಟ್ ಗೆ ತೆರಳುವುದಕ್ಕೂ ಮುನ್ನ ಶ್ರೀದೇವಿ ಭೈರಪ್ಪ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. 'ಕಳೆದ 15 ದಿನ ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆಗೆ ಇದ್ದಾಗ ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ ತ್ಯಂತ ಸೂಕ್ಷ್ಮ ಹಾಗೂ ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಕಳೆದ ಏಳು ತಿಂಗಳು ತೀವ್ರ ಒತ್ತಡ ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಿತ್ರರಂಗದ ಬಂಧುಗಳು, ಅನ್ಯಾಯದ ಧ್ವನಿ ಎತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ನನಗೆ ಸಾಂತ್ವನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು, ನ್ಯಾಯದ ಪರ ಹೋರಾಡಲು ನೀವೆಲ್ಲರು ಸಹಾಯ ಮಾಡಿದ್ದೀರಿ. ನಿಮ್ಮ ಋಣ ತೀರಿಸಲು ನನಗೆ ದೇವರು ಅವಕಾಶ ಕೊಡಲೆಂದು ಪ್ರಾರ್ಥಿಸುತ್ತೇನೆ. ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ' ಎಂದು ಶ್ರೀದೇವಿ ಭೈರಪ್ಪ ಸುಧೀರ್ಘವಾಗಿ ಬರೆದುಕೊಂಡಿದ್ದಾರೆ. ಇಂದು ಫ್ಯಾಮಿಲಿ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.