For the best experience, open
https://m.suddione.com
on your mobile browser.
Advertisement

ICC ಚುನಾವಣೆಯಲ್ಲಿ ಸ್ಪರ್ಧಿಸಲು ಸೌರವ್ ಗಂಗೂಲಿಗೆ ಅವಕಾಶ ನೀಡಿ : ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

09:17 PM Oct 17, 2022 IST | suddionenews
icc ಚುನಾವಣೆಯಲ್ಲಿ ಸ್ಪರ್ಧಿಸಲು ಸೌರವ್ ಗಂಗೂಲಿಗೆ ಅವಕಾಶ ನೀಡಿ   ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ
Advertisement

ಕೋಲ್ಕತಾ: ಈ ತಿಂಗಳಲ್ಲಿ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಇದೀಗ ದಾದಾ ಪರ ದೀದಿ ಬ್ಯಾಟ್ ಬೀಸಿದ್ದಾರೆ. ಕ್ರಿಕೆಟ್ ನಲ್ಲೂ ರಾಜಕೀಯ ಬೇಡ. ಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಿ ಎಂದು ಮಮತಾ ಬ್ಯಾನರ್ಜಿ ಪಿಎಂ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

Advertisement
Advertisement

ಮೋದಿ ಅವರೇ ಗಂಗೂಲಿ ಅವರು ರಾಜಕೀಯ ಪಕ್ಷದ ಸದಸ್ಯರಲ್ಲ. ಹೀಗಾಗಿ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಡಿ. ಅವರು ಬಿಸಿಸಿಐ ಸ್ಥಾನಕ್ಕೆ ಸೂಕ್ತ ವ್ಯಕ್ತಿ. ಸೌರವ್ ಗಂಗೂಲಿ ಅವರು ಎರಡನೇ ಬಾರಿಗೆ ಈ ಸ್ಥಾನದಿಂದ ವಂಚಿತರಾಗಿದ್ದಾರೆ. ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಗೆ ಕಳುಹಿಸಿಕೊಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

ಸೌರವ್ ಗಂಗೂಲಿ ಅವರನ್ನು ಅನ್ಯಾಯವಾಗಿ ಹೊರಗಿಡಲಾಗಿದೆ. ನನಗೆ ತುಂಬಾ ದುಃಖವಾಗಿದೆ. ಸೌರವ್ ಗಂಗೂಲಿ ಬಹಳ ಜನಪ್ರಿಯ ವ್ಯಕ್ತಿ. ಅವರು ಭಾರತ ತಂಡದ ನಾಯಕರಾಗಿದ್ದರು. ಅವರು ದೇಶಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರು ಬಂಗಾಳದ ಹೆಮ್ಮೆ ಮಾತ್ರವಲ್ಲ, ಭಾರತದ ಹೆಮ್ಮೆಯೂ ಹೌದು. ಅವರನ್ನು ಹೊರಗಿಟ್ಟಿರೋದು ಅನ್ಯಾಯ. ಸೌರವ್ ಗಂಗೂಲಿ ಅವರಿಗೆ ಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ

Advertisement
Advertisement

Advertisement
Tags :
Advertisement