For the best experience, open
https://m.suddione.com
on your mobile browser.
Advertisement

ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

12:01 PM Nov 19, 2023 IST | suddionenews
ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ   ಮುಖ್ಯಮಂತ್ರಿ ಸಿದ್ದರಾಮಯ್ಯ
Advertisement

ಬೆಂಗಳೂರು. ನವೆಂಬರ್.19 : ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುಲಿರುವ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ  ಭಾರೀ ಕುತೂಹಲ ಮೂಡಿಸಿದೆ.

Advertisement
Advertisement

ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಯಾವ ತಂಡವೂ ಮಾಡದ ಸಾಧನೆಯನ್ನು ಭಾರತ ತಂಡ ಮಾಡಿದೆ. ಹಾಗಾಗಿ ಅಂತಿಮ ಪಂದ್ಯದಲ್ಲಿಯೂ ಕೂಡಾ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿ ಕಪ್ ಗೆಲ್ಲುವ ಮೂಲಕ ಹೊಸ ಭರವಸೆ ಮೂಡಿಸಿದ್ದಾರೆ.

Advertisement

ಶುಭ ಹಾರೈಸಿದ ಮುಖ್ಯಮಂತ್ರಿ : ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು,  ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.

Advertisement

ಗೆದ್ದು ಬಾ ಇಂಡಿಯಾ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆಲುವಿಗಾಗಿ ಕ್ರಿಕೆಟ್ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಗೆದ್ದು ಬಾ ಎಂದು ಶುಭ ಕೋರಿದ್ದಾರೆ.

Advertisement
Tags :
Advertisement