For the best experience, open
https://m.suddione.com
on your mobile browser.
Advertisement

ಇಂದು ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಮೊದಲ ಪಂದ್ಯ : ಶುಭಮನ್ ಗಿಲ್ ಆಡುವುದು ಅನುಮಾನ

07:51 AM Oct 08, 2023 IST | suddionenews
ಇಂದು ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಮೊದಲ ಪಂದ್ಯ   ಶುಭಮನ್ ಗಿಲ್ ಆಡುವುದು ಅನುಮಾನ
Advertisement

Advertisement
Advertisement

ಸುದ್ದಿಒನ್  : IND vs AUS ವಿಶ್ವಕಪ್ : ತವರು ನೆಲದಲ್ಲಿ ಏಕದಿನ ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಇಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ.

ಭಾರತ ಏಕದಿನ ವಿಶ್ವಕಪ್‌ನ ಅಂಗವಾಗಿ ಭಾನುವಾರ (ಅಕ್ಟೋಬರ್ 8) ಚೆನ್ನೈನಲ್ಲಿ ನಡೆಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್ ಬೇಟೆ ಆರಂಭವಾಗಲಿದೆ. ವಿಶ್ವ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಆಸೀಸ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದುಕೊಂಡಿತ್ತು. ಎರಡೂ ತಂಡಗಳು ಏಕದಿನ ವಿಶ್ವಕಪ್‌ಗೆ ಆತ್ಮವಿಶ್ವಾಸದಿಂದ ಪ್ರವೇಶಿಸುತ್ತಿವೆ.
ಆದರೆ, ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಆಡುತ್ತಾರೋ ಇಲ್ಲವೋ ಎಂಬ ಅನುಮಾನ ಮೂಡಿದೆ.

Advertisement
Advertisement

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ ಪಂದ್ಯ ಭಾನುವಾರ (ಅಕ್ಟೋಬರ್ 8) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಲೈವ್ ಟೆಲಿಕಾಸ್ಟ್, ಸ್ಟ್ರೀಮಿಂಗ್ ವಿವರಗಳು

IND vs AUS ವಿಶ್ವಕಪ್: ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಟಿವಿ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಡಿಡಿ ಸ್ಪೋರ್ಟ್ಸ್ ಚಾನೆಲ್ ನಲ್ಲಿಯೂ ಸಹ ಲೈವ್ ಬರುತ್ತದೆ. ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು Disney+ Hotstar OTT ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ಪಿಚ್, ವಾತಾವರಣ : ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯ ನಡೆಯಲಿರುವ ಚೆನ್ನೈ ಚೆಪಾಕ್ ಪಿಚ್ ಸ್ಪಿನ್ ಗೆ ಅನುಕೂಲವಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಈ ಪಿಚ್ ನಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳೇ ಹೆಚ್ಚು ಗೆಲುವು ಸಾಧಿಸಿವೆ. ಅಲ್ಲದೆ, ಭಾನುವಾರ ಚೆನ್ನೈನಲ್ಲಿ ಮಳೆಯ ಸಾಧ್ಯತೆ ತುಂಬಾ ಕಡಿಮೆ. ಒಂದು ವೇಳೆ ಬಂದರೂ ಭಾನುವಾರ ಸಂಜೆ ತುಂತುರು ಮಳೆಯಾಗುವ ಸಂಭವವಿದೆ.

ಗಿಲ್ ಡೌಟ್.. ಮೂವರು ಸ್ಪಿನ್ನರ್ ಗಳೊಂದಿಗೆ ಭಾರತ!

IND vs AUS ವಿಶ್ವಕಪ್: ಡೆಂಗ್ಯೂನಿಂದ ಬಳಲುತ್ತಿರುವ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯಕ್ಕೆ ಲಭ್ಯವಾಗುವುದು ಕಷ್ಟಕರವಾಗಿದೆ. ಇದರೊಂದಿಗೆ ನಾಯಕ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅಲ್ಲದೆ ಟೀಂ ಇಂಡಿಯಾ ಅಂತಿಮ ತಂಡದಲ್ಲಿ ಮೂವರು ಸ್ಪಿನ್ನರ್‌ಗಳು ಸ್ಥಾನ ಪಡೆಯುವ ಸಾಧ್ಯತೆಗಳಿವೆ. ಜಡೇಜಾ, ಅಶ್ವಿನ್ ಮತ್ತು ಕುಲದೀಪ್ ಆಡುವ ಅವಕಾಶವಿದೆ.

ಭಾರತ ಅಂತಿಮ ತಂಡ : ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್/ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಭುಮ್ರಾಹ್ ಸಿರಾಜ್

ಆಸ್ಟ್ರೇಲಿಯಾ ಅಂತಿಮ ತಂಡ : ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ಜೋಸ್ ಹ್ಯಾಜಲ್‌ವುಡ್, ಅಜಮ್ ಝಂಪಾ

Advertisement
Tags :
Advertisement