For the best experience, open
https://m.suddione.com
on your mobile browser.
Advertisement

India vs South Africa, T20 World Cup 2024 : ಕೋಟ್ಯಂತರ ಭಾರತೀಯರ ಕನಸು ನನಸು ; ರೋಚಕ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

11:42 PM Jun 29, 2024 IST | suddionenews
india vs south africa  t20 world cup 2024   ಕೋಟ್ಯಂತರ ಭಾರತೀಯರ ಕನಸು ನನಸು   ರೋಚಕ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು
Advertisement

ಸುದ್ದಿಒನ್ : ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಟಿ20 ವಿಶ್ವಕಪ್ 2024 ಪ್ರಶಸ್ತಿ ಗೆದ್ದು ಭಾರತ ಎರಡನೇ ಬಾರಿಗೆ ಕಿರು ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. 11 ವರ್ಷಗಳ ಐಸಿಸಿ ಪ್ರಶಸ್ತಿ ದಾಹ ತಣಿಸಿತು.

Advertisement

ಇಂದು (ಜೂನ್ 29) ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ 2024 ರ ಫೈನಲ್‌ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ತಂಡ ವಿಶ್ವಕಪ್ ಗೆದ್ದುಕೊಂಡಿದೆ.

ದಕ್ಷಿಣ ಆಫ್ರಿಕಾ ಕಡೆಯ 5 ಓವರ್‌ಗಳಲ್ಲಿ 30 ರನ್ ಬೇಕಿತ್ತು.  ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್ ರಂತಹ ಅಪಾಯಕಾರಿ ಬ್ಯಾಟ್ಸ್ ಮನ್ ಗಳು ಕ್ರೀಸ್ ನಲ್ಲಿದ್ದರು. ಆ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಗೆಲ್ಲುತ್ತದೆ ಎಂದು ಅನಿಸಿತ್ತು. ಆದರೆ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಮೊದಲು ಅವರು ಕ್ಲಾಸೆನ್ ಅವರನ್ನು ಔಟ್ ಮಾಡಿ ದಕ್ಷಿಣ ಆಫ್ರಿಕಾವನ್ನು ಒತ್ತಡಕ್ಕೆ ಸಿಲುಕಿಸಿದರು. ತೀಕ್ಷ್ಣವಾದ ಎಸೆತಗಳನ್ನು ಬೌಲಿಂಗ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳನ್ನು ಕಂಗಾಲಾಗುವಂತೆ ಮಾಡಿದರು. ಮಧ್ಯದಲ್ಲಿ ವಿಕೆಟ್ ಕಬಳಿಸಿ ಪಂದ್ಯದ ಮೇಲಿನ ಹಿಡಿತ ಸಾಧಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡರು.

Advertisement

Tags :
Advertisement