For the best experience, open
https://m.suddione.com
on your mobile browser.
Advertisement

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ ನೀರಜ್ ಚೋಪ್ರಾ

06:49 AM Aug 28, 2023 IST | suddionenews
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌   ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ ನೀರಜ್ ಚೋಪ್ರಾ
Advertisement

Advertisement

ಸುದ್ದಿಒನ್

Advertisement

• ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನೀರಜ್ ಚೋಪ್ರಾ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅವರು ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ನೀರಜ್ ಚೋಪ್ರಾ: ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮಿಂಚಿದ್ದಾರೆ. ಅವರು ಚಿನ್ನದ ಪದಕವನ್ನು ಗೆದ್ದು, ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ನೀರಜ್ ಚೋಪ್ರಾ 88.17 ಮೀಟರ್‌ ದೂರ ಜಾವೆಲಿನ್‌ ಎಸೆದು ಚಿನ್ನದ ಪದಕ ಗೆದ್ದಿದ್ದಾರೆ.

ನೀರಜ್ ಚೋಪ್ರಾ ಮೊದಲ ಸುತ್ತಿನಲ್ಲಿ ಜಾವೆಲಿನ್ ಎಸೆಯಲು ಸಾಧ್ಯವಾಗಲಿಲ್ಲ.  ಎರಡನೇ ಸುತ್ತಿನಲ್ಲಿ 88.17 ಮೀಟರ್ ದೂರ ಜಾವೆಲಿನ್ ಎಸೆದು ಅಗ್ರಸ್ಥಾನಕ್ಕೆ ಜಿಗಿದಿದ್ದಲ್ಲದೆ ಪದಕವನ್ನು ಗೆದ್ದುಕೊಂಡರು.

ಮುಂದಿನ ಪ್ರಯತ್ನಗಳಲ್ಲಿ ನೀರಜ್ ಚೋಪ್ರಾ 86.32, 84.64, 87.73, 83.98 ಮೀಟರ್‌ ಎಸೆದರು. ಪಾಕಿಸ್ತಾನದ ಅರ್ಷದ್ ನದೀಮ್ (87.82 ಮೀಟರ್) ಬೆಳ್ಳಿ ಪದಕ ಗೆದ್ದರೆ, ಜೆಕ್ ಗಣರಾಜ್ಯದ ಜಾಕುಬ್ ವಾಡ್ಲೆಜ್ಕ್ (86.67 ಮೀಟರ್) ಕಂಚಿನ ಪದಕ ಗೆದ್ದರು.

ನೀರಜ್ ಚೋಪ್ರಾ ಅವರೊಂದಿಗೆ ಭಾರತದ ಆಟಗಾರರಾದ ಕಿಶೋರ್ ಜೆನಾ (84.77) ಐದನೇ ಸ್ಥಾನ ಮತ್ತು ಡಿಪಿ ಮನು (84.14) ಜಾವೆಲಿನ್ ಎಸೆತದಲ್ಲಿ ಆರನೇ ಸ್ಥಾನ ಗಳಿಸಿ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ತೋರಿದರು. ಶೂಟರ್ ಅಭಿನವ್ ಬಿಂದ್ರಾ ನಂತರ, ನೀರಜ್ ಚೋಪ್ರಾ ಒಲಿಂಪಿಕ್ಸ್ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಅಥ್ಲೀಟ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

Tags :
Advertisement