ನಾಳೆಯೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್..!
ತುಮಕೂರು: ಲೋಕಸಭಾ ಚುನಾವಣೆ ಬರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿವೆಮ ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಬಯಸುತ್ತಿದ್ದಂತೆ ಎರಡೂ ಪಕ್ಷದಲ್ಲೂ ಅಸಮಾಧಾನ ಹೊಗೆಯಾಡುತ್ತಿದೆ. ಇದರ ಬೆನ್ನಲ್ಲೇ ಪಕ್ಷ ಬಿಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ನಾಳೆಯೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಗೌರಿ ಶಂಕರ್ ಸಜ್ಜಾಗಿದ್ದಾರೆ.
ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ತನ್ನ ಕ್ಷೇತ್ರದಲ್ಲಿ ಹೆಚ್ಚು ಪ್ರಾಬಲ್ಯ ಉಳಿಸಿಕೊಂಡಿದ್ದಾರೆ. ಗ್ರಾಮಾಂತರದಲ್ಲಿ ಗೌರಿ ಶಂಕರ್ ಎಂದರೇನೆ ಯುವಕರಿಗೆ ಸಿಕ್ಕಾಪಟ್ಟೆ ಕ್ರೇಜ್ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಗೆದ್ದೆ ಗೆಲ್ಲುತ್ತಾರೆ ಎಂಬನಂಬಿಕೆ ಅಗಾಧವಾಗಿತ್ತು. ಅವರ ಹಿಂದೆ ಪ್ರಚಾರ ಮಾಡುತ್ತಿದ್ದ ಜನಸಂಖ್ಯೆ ಅಷ್ಟಿತ್ತು. ಆದರೆ ಅನಿರೀಕ್ಷಿತ ಸೋಲು ಕಂಡಿದ್ದಾರೆ. ತುಮಕೂರು ಗ್ರಾಮಾಂತರ ಭಾಗದಲ್ಲಿ ನೆಕ್ ಟು ನೆಕ್ ಫೈಟ್ ಇರುವುದೇ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ. ಕಾಂಗ್ರೆಸ್ ಅಷ್ಟಾಗಿ ಸ್ಪರ್ಧೆ ಮಾಡುವಂತ ಕ್ಯಾಂಡಿಡೇಟ್ ಇರಲಿಲ್ಲ. ಇದೀಗ ಅಂತ ಸ್ಪರ್ಧೆ ಕೊಡುವವರೇ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ.
ಈ ಬೆನ್ನಲ್ಲೇ ಗೌರಿಶಂಕರ್ ಹಾಗೂ ದಾಸರಹಳ್ಳಿ ಮಂಜುನಾಥ್ ಕಾಂಗ್ರೆಸ್ ಸೇರಲು ಗಳಿಗೆ ಫಿಕ್ಸ್ ಆಗಿದೆ. ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಇದರ ಜೊತೆಗೆ ನೂರಾರು ಕಾರ್ಯಕರ್ತರು ಸಹ ಕಾಂಗ್ರೆಸ್ ಸೇರಲಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಗೌರಿಶಂಕರ್ ಹಾಗೂ ಮಂಜುನಾಥ್ ಅವರ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ.